ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ವಿಶ್ವ ಪರಿಸರ ದಿನಾಚರಣೆ

ಕಡಬ :ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಹೊಸ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿ ಮಾತನಾಡಿದ ಕಡಬ ಕ್ಲಸ್ಟರ್ ನ ಸಂಪನ್ಮೂಲ ಅಧಿಕಾರಿ ಶ್ರೀಯುತ ಗಣೇಶ್ ನಡುವಲ್ ವಿದ್ಯಾರ್ಥಿಗಳಿಗೆ ಉತ್ತಮ ಓದುಗಾರರಾಗಿ ,ಆತ್ಮಚರಿತ್ರೆಯನ್ನು ಓದಿ, ಕನಸುಗಳನ್ನು ಹೇಗೆ ಕಾಣಬೇಕು ಮತ್ತು ಕನಸುಗಳನ್ನು ಹೇಗೆ ನನಸಾಗಿಸಬೇಕು, ಜೊತೆಗೆ ಕಥೆಗಳನ್ನು ಬರೆಯುವ ರೂಢಿಯನ್ನು ಬೆಳೆಸಿಕೊಳ್ಳಿ ಹಾಗೂ ವಿಶ್ವ ಪರಿಸರ ದಿನದ ಮಹತ್ವವನ್ನು ತಿಳಿಸಿ ವಿದ್ಯಾರ್ಥಿಗಳಿಗೆ ಪ್ರೇರೆಪಣೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಸುನೀಲ್ ಪ್ರವೀಣ್ ಪಿಂಟೋ ರವರು ಶಾಲೆಯ ನೂತನ ಯೂ ಟ್ಯೂಬ್ ಚಾನೆಲ್ ಅನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಜೆಸಿಂತಾ ವೇಗಸ್ ,ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರು ಶ್ರೀಯುತ ಗಿರಿಧರ್ ರೈ,ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ದಕ್ಷ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡವನ್ನು ನೆಡಲಾಯಿತು.
ಸಹಶಿಕ್ಷಕಿ ಶ್ರೀಮತಿ ಸಂಗೀತ ಸ್ವಾಗತಿಸಿ, ಶ್ರೀಮತಿ ಮಾನಸ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಭವಾನಿ ನಿರೂಪಿಸಿದರು.
