ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ:ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆ

ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.
ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.


ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್,
ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ . ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಸುಜೀರ್ ಶೆಟ್ಟಿ ಸೂರಿಂಜೆ, ಗಿರೀಶ್ ಎಂ ಶೆಟ್ಟಿ ಪೆರ್ಮುದೆ, ಪ್ರಮೋದ್ ಶೆಟ್ಟಿ ಹೊಸಬೆಟ್ಟು, ಸುಕೇಶ್ ಶೆಟ್ಟಿ ಚೇಳಾರ್, ರಾಮಚಂದ್ರ ಶೆಟ್ಟಿ ಕುಳಾಯಿ, ದಾಮೋದರ ಶೆಟ್ಟಿ ತೋಕೂರು, ಪದ್ಮನಾಭ ಶೆಟ್ಟಿ ಕುತ್ತೆತ್ತೂರು, ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಜ್ಯೋತಿ ಜೆ ಶೆಟ್ಟಿ ಸುರತ್ಕಲ್ ಆಯ್ಕೆಯಾದರು.
ಮಹಿಳಾ ವೇದಿಕೆ ನೂತನ ಅಧ್ಯಕ್ಷರಾಗಿ ಸರೋಜಾ ಟಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ .ಉಪಾಧ್ಯಕ್ಷರಾಗಿ ಜಯಂತಿ ಪಿ ಟಿ ರೈ, ಕೋಶಾಧಿಕಾರಿಯಾಗಿ ಮಾಲತಿ ಜೆ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕವಿತಾ ಪಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಶಾ ಕಿರಣ್ ರೈ, ಕ್ರೀಡಾ ಕಾರ್ಯದರ್ಶಿಯಾಗಿ ಬಬಿತ ಜೆ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ದೀಪಾ ಕೆ ಶೆಟ್ಟಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಉಲ್ಲಾಸ್ ಶೆಟ್ಟಿ ಪೆರ್ಮುದೆ, ದಿವಾಕರ ಸಾಮಾನಿ ಚೇಳಾರ್ ಗುತ್ತು ಕರ್ತವ್ಯ ನಿರ್ವಹಿಸಿದ್ದರು. ಸಂಘದ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ಪತ್ರಿಕೋದ್ಯಮದಲ್ಲಿ ಕಳೆದ 38 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಅವರು ಸುರತ್ಕಲ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


1987 ರಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ‘ಮುಂಗಾರು’ ಕನ್ನಡ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ ಬಳಿಕ ಹೊಸಸಂಜೆ, ಕರಾವಳಿ ಮಿತ್ರ, ಕರಾವಳಿ ಮಾರುತದಲ್ಲಿ ಕಾರ್ಯ ನಿರ್ವಹಿಸಿದರು. ಪ್ರಸ್ತುತ ಜಯಕಿರಣ ಕನ್ನಡ ದೈನಿಕದಲ್ಲಿ ಕಳೆದ 20 ವರ್ಷಗಳಿಂದ ಪ್ರಧಾನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಂಗ ಚಾವಡಿ ಎಂಬ ಸಾಂಸ್ಕೃತಿಕ, ಸಾಮಾಜಿಕ ಸಂಸ್ಥೆಯನ್ನು ಕಟ್ಟಿ ಹಲವಾರು ವರ್ಷಗಳಿಂದ ಕಲಾ ಸಾಧಕರಿಗೆ ಪ್ರಶಸ್ತಿ ನೀಡುತ್ತಾ ಬರುತ್ತಿರುವ ಜಗನ್ನಾಥ ಶೆಟ್ಟಿಯವರಿಗೆ
2008 ರಲ್ಲಿ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2017 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ. 2018 ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ ಲಭಿಸಿದೆ. 2011 ರಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, 2021 ರಲ್ಲಿ ಕರ್ನಾಟಕ‌ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೇಂದ್ರೀಯ ಘಟಕದಲ್ಲಿ ಸಂಘಟನಾ ಕಾರ್ಯದರ್ಶಿಯಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜೀ ಅಧ್ಯಕ್ಷರಾಗಿ ಪ್ರೆಸ್ ಕ್ಲಬ್ ನಲ್ಲಿ ಉಪಾಧ್ಯಕ್ಷರಾಗಿ, ಪತ್ರಿಕಾಭವನ ಟ್ರಸ್ಟ್ ನಲ್ಲಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬಂಟರ ಯಾನೆ ನಾಡವರ ಮಾತೃ ಸಂಘದಲ್ಲಿ ನಾಲ್ಕು ಬಾರಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸುರತ್ಕಲ್ ಬಂಟರ ಸಂಘದಲ್ಲಿ 29 ವರ್ಷಗಳಲ್ಲಿ ನಿರ್ದೇಶಕರಾಗಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಂಘಟನಾ ಕಾರ್ಯದರ್ಶಿಯಾಗಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಬಾಳ ಜಗನ್ನಾಥ ಶೆಟ್ಟಿ ಅವರು ಈಗ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

Related Posts

Leave a Reply

Your email address will not be published.