ಕಾಪು : ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಕಾಪು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡುವ ಬಗ್ಗೆ ಹಾಗೂ ಸರಕಾರಿ ನಿವೇಶನವನ್ನು ಗುರುತಿಸಿ ಸರ್ವೆ ಕಾರ್ಯ ಕೂಡಲೇ ಮುಗಿಸುವಂತೆ ಶಾಸಕರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಪ್ರತೀಭಾ ಆರ್, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ವಾರಿಜಾಕ್ಷಿ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
