ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
