ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ; 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ಪ್ರಧಾನ ಕಾರ್ಯದರ್ಶಿಯವರಾದ ಕುಮಾರಿ ಯಶಶ್ರೀ ಬಿ ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವು ಪ್ರತಿಯೊಬ್ಬರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಮುಖ್ಯ ಶಿಕ್ಷಕ ರಾಮದಾಸ ನಾಯ್ಕ, ಮಾತನಾಡಿ ನಮ್ಮ ಶಾಲೆ ಭಾರತದ ಪ್ರಜೆಗಳಾದ ನಾವು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಸನ್ನದ್ಧರಾಗಬೇಕು ಇಂದು ನಮ್ಮ ಶಾಲೆ ಮಕ್ಕಳಿಗೆ ಗಾಂಧೀಜಿ , ಸುಭಾಷ್ , ನೆಹರು , ಒನಕೆ ಓಬವ್ವ , ಭಗತ್ ಸಿಂಗ್ ,ಭಾರತಮಾತಾ ಮೊದಲಾದ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣವನ್ನು ಧರಿಸಿದ್ದರು. ಜೊತೆಗೆ ಹಲವಾರು ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಮಕ್ಕಳು ಹೆಚ್ಚು ಹಾಕಿದರು ಎಂದರು.

ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಧಾನ ಕಾರ್ಯದರ್ಶಿ ಕು. ಯಶಶ್ರೀ ಬಿ.ಶೆಟ್ಟಿ, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.