HomeFresh Newsಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್

ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್

ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ ಸಂಭ್ರಮ ನಡೆಯಿತು

ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ದ್ವಜಾರೋಹಣ ಕಾರ್ಯಕ್ರಮದಲ್ಲಿ ಶ್ರೀ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದು
ಮಾತನಾಡಿ ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಾಧಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರಾದ ಚಂದ್ರಶೇಖರ ನಾವುಡ,ಪ್ರಗತಿ ಪರ ಕೃಷಿಕರಾದ ಬಾಬು ಆಚಾರ್ಯ ಹೇರೂರು, ಜನತಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವರ, ಸಮಾಜ ಸೇವಕ ಬೆಂಕಿಮಣಿ ಸಂತು ಇವರನ್ನು ಸನ್ಮಾನಿಸಲಾಯಿತು.


ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಧ್ವಜಾರೋಹಣವನ್ನು ನಿರ್ವಹಿಸಿ ಮಾತನಾಡಿ
ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು.ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ
ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿಜನತಾ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಪ್ರಗತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಂದಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments