ಜಮ್ಮು-ಕಾಶ್ಮೀರದ: ಕಥುವಾ ಜಿಲ್ಲೆಯ ಮೇಘಸ್ಫೋಟ: ನಾಲ್ವರು ಸಾವು, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,
ಇದೀಗ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ಜಂಟಿ ತಂಡವು ಸ್ಥಳೀಯ ಸ್ವಯಂಸೇವಕರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.
ಇಲ್ಲಿಯವರೆಗೆ ನಾಲ್ಕು ಶವಗಳನ್ನು ಹೊರತೆಗೆಯಲಾಗಿದ್ದು, ಆರು ಮಂದಿ ಗಾಯಗೊಂಡವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.