ಕರಾವಳಿ ಪ್ರವಾಸೋದ್ಯಮ ಕುರಿತ ಜಿಲ್ಲಾ ಜನ ಪ್ರತಿನಿಧಿಗಳ ಸಭೆ

ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಭಾಧ್ಯಕ್ಷರು ಮತ್ತು ಸಚಿವರ ಉಪಸ್ಥಿತಿಯಲ್ಲಿ ವಿವರವಾಗಿ ಚರ್ಚಿಸಿದರು