ಪುತ್ತೂರು :ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು. ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್, ಕೋಸ್ಟಲ್ ಹೋಮ್ ದರ್ಬೆ ಇದರ ಮಾಲಕರಾದ ಸಂದೇಶ್ ರೈ,ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಸುಕುಮಾರ್ ಹಾಗೂ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಶ್ರೀಮತಿ ಶಿಲ್ಪಾ ಸುರೇಶ್ ಸ್ವಾಗತಿಸಿ,ಶಿಕ್ಷಕಿ ರಮ್ಯ ವಂದಿಸಿ ಶಿಕ್ಷಕಿ ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.
