ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಪು ಮಾರಿಯಮ್ಮನ ದರುಶನ

ಕಾಪು: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 1ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು.
ಕಾಪು ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.