ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ ವಂ. ಪ್ರೀತೇಶ್ ಮಿಸ್ಕಿತ್. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ಪ್ರವಾದಿಯಾಗಿ ಕ್ರಿಸ್ತನನ್ನು ಎಲ್ಲೆಡೆಯಲ್ಲೂ ಪಸರಿಸುವ ಕಾರ್ಯದಲ್ಲಿ ತೊಡಗಬೇಕೆಂದು ಕರೆ ನೀಡಿದರು. “ಇಂದು ಹಲವು ಕಾರಣಗಳಿಂದ ನಮ್ಮ ಸಮಾಜದಲ್ಲಿ ಮತ್ತು ಪ್ರಪಂಚದಲ್ಲಿ ಕತ್ತಲೆ ತುಂಬಿದೆ. ಇಂತಹ ಸನ್ನಿವೇಶದಲ್ಲಿ ತಮ್ಮ ಸೇವೆಗೆ ನೀಡಿದ ಜನತೆಗೆ ಭರವಸೆ ತುಂಬುವ ಮತ್ತು ಕತ್ತಲೆಯನ್ನು ದೂರ ಮಾಡುವ ಪ್ರವಾದಿಗಳಾಗಬೇಕು” ಎಂದು ನವ ಯಾಜಕರಿಗೆ ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್ ಜೆ.ಸ., ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಐವನ್ ಮೆಂಡೋನ್ಸಾ ಹಾಗೂ ಹಲವು ಗುರುಗಳು ಹಾಗೂ ಕನ್ಯಾಸ್ತ್ರೀ ಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್‌ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

Related Posts

Leave a Reply

Your email address will not be published.