ಉಡುಪಿ: ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್ ಬಳಕೆಯ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅನೇಕ ಉದಾಹರಣೆಗಳ ಮೂಲಕ ತಿಳಿಸಿದರು.
ಗೌರವ ಅತಿಥಿಯಾಗಿ ಆಗಮಿಸಿದ ಸಹಾಯಕ ನಿರ್ದೇಶಕರು ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆಯ
ಡಾ. ರೋಷನ್ ಕುಮಾರ್ ಶೆಟ್ಟಿ, ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ನಿರ್ದಿಷ್ಟ ಗುರಿ ಇರಬೇಕು. ಗುರಿ ತಲುಪಬೇಕಾದರೆ ನಿರಂತರ ಪ್ರಯತ್ನ ಬೇಕು. ಸಮಾಜ ನಮಗೆ ವಿವಿಧ ರೀತಿಯಲ್ಲಿ ಪಾಠವನ್ನು ಕಲಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳು ಮತ್ತು ಸಮಾಜ ವಿರೋಧಿ ಚಟುವಟಿಕೆಗಳಿಂದ ದೂರವಿದ್ದರೆ ಮಾತ್ರ ಒಂದು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮೀ ಕೃಷ್ಣಪ್ರಸಾದ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳ ಬಗ್ಗೆ ತಿಳಿಸಿದರು.
ಕಾಲೇಜಿನ ಸಿ ಓ ಓ ಡಾ. ಗೌರಿ ಪ್ರಭು ವಾರ್ಷಿಕ ವರದಿ ವಾಚನ ಮಾಡಿದರು. ಪ್ರಾರಂಭದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮಾಧವ ಪೂಜಾರಿ ಸ್ವಾಗತಿಸಿ, ಕು ನಿವೇದಿತಾ ವಂದಿಸಿದರು. ಕು. ಐಶ್ವರ್ಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.