ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್ ಪತ್ನಿ ಸಮೇತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ. ವಿದ್ಯಾಶಂಕರ್ ಎಸ್ ದಂಪತಿಗಳನ್ನು
ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಹಾಗೂ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.