ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ವ್ಯಕ್ತಿತ್ವದ ಸುದೀಪ್ ಭಂಡಾರಿಯವರ ಆತ್ಮಹತ್ಯೆ ಸುದ್ದಿ ಕೇಳಿ ಹೆಬ್ರಿ ಪರಿಸರದ ಜನರ ಆಘಾತಗೊಂಡಿದ್ದಾರೆ.
ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.