ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್ ಕಂಬಗಳನ್ನು ಸ್ಥಳಾಂತರಗೊಳಿಸಿ ಓವರ್ ಪಾಸ್ ಕಾಮಗಾರಿಗೆ ಬೇಕಾದ ವಸ್ತುಗಳನ್ನು ದಾಸ್ತಾನು ಮಾಡಿಕೊಂಡು ಅಕ್ಟೋಬರ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸುವಂತೆ ಮತ್ತು ಈಗಾಗಲೇ ಗುರುತಿಸಲಾದ ಬ್ಲಾಕ್ ಸ್ಪಾಟ್ ಗಳಲ್ಲಿ ಅಪಘಾತ ತಡೆಯಲು ಮುಂಜಾಗ್ರತಾ ಕ್ರಮ ವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಸಹಾಯಕ ಆಯುಕ್ತರಾದ ರಶ್ಮಿ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಹಾಗೂ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರಾದ ಜಾವಿದ್ ಅಜ್ಮಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.