ಬೆಳಪು ಸ್ನಾತಕೋತ್ತರ ಕೇಂದ್ರದ ಕಾಮಗಾರಿ ಪರಿಶೀಲಿಸಿದ ಸಚಿವ ಎಂ.ಸಿ ಸುಧಾಕರ್

ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಶಾಸಕರು ಮಾತನಾಡಿ ಸ್ನಾತಕೋತ್ತರ ಕೇಂದ್ರದ 80 ಶೇಖಡಾ ಕಾಮಗಾರಿ ಮುಗಿದಿದ್ದು ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ ಮಂಜೂರು ಗೊಳಿಸುವುದರ ಜೊತೆಗೆ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಆರಂಭಿಸುವಂತೆ ಶಾಸಕರು ಸಚಿರಲ್ಲಿ ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ,ವೈ.ಸುಕುಮಾರ್,
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎ ಗಫೂರ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಪಿ.ಎಲ್ ಧರ್ಮ, ತಹಶೀಲ್ದಾರದ ಪ್ರದೀಪ್ ಉಪಸ್ಥಿತರಿದ್ದರು.