ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಎಂ.ಆರ್.ಪಿ.ಎಲ್ (ಸಿಎಸ್ಆರ್) ಫಂಡ್‌ನಿಂದ 12.45 ಲಕ್ಷ ರೂಪಾಯಿ ಮಂಜೂರು
ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆರ್.ಪಿ.ಎಲ್ (ಸಿಎಸ್ಆರ್) ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಕಾಮಗಾರಿಗೆ ಇಂದು ದಿನಾಂಕ 29-10-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ ಹಾಗೂ ಪುರಸಭೆಯ ಸದಸ್ಯರು ಉಪಸ್ಥಿತರಿದ್ದರು.


















