ಮೂಡುಬಿದಿರೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.
ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಮ್ಮ ಪಕ್ಕದಲ್ಲಿ ದೇಶವನ್ನು ಲೂಟಿ ಮಾಡಿದವರ ಪೃಯವನ್ನು ಓದುತ್ತಿದ್ದೇವೆ. ನಾನುನುದಿಯ ಉಳಿವು, ದೇಶಕ್ಕಾಗಿ ಬಲಿದಾನ ಮಾಡಿದ ಮಹಾನ್ ನಾಯಕರ ಪರಿಚಯ ನಮ್ಮ ಮುಂದಿನ ಪೀಳಿಗೆಗೆ ಆಗಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಗತ್ಯ ಎಂದರು.
ತಹಸೀಲ್ದಾರ್ ಶ್ರೀಧರ ಮುಂದಲಮನಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿದರು.
ತಾ. ಪಂ. ಮುಕ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅರುಣ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ರಾಮ ಕೆ. ಕಾರ್ಯಕ್ರಮ ನಿರ್ವಹಿಸಿದರು.

Related Posts

Leave a Reply

Your email address will not be published.