ಎನ್ನೆಂಸಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಪ್ರಯುಕ್ತ ನಾಲ್ಕನೇ ದಿನದ ಕಾರ್ಯಕ್ರಮ
ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ ಕಾಲೇಜುಗಳಲ್ಲಾಗಬೇಕು ಲೀಲಾ ದಾಮೋದರ್:
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗಾಗೂ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ನವೆಂಬರ್ 4 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯದ ಸಾಹಿತಿ ಲೀಲಾ ದಾಮೋದರ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಶಾಲಾ – ಕಾಲೇಜುಗಳಲ್ಲಾಗಬೇಕು. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪ್ರೇರಕ ಶಕ್ತಿಯಾಗಲಿವೆ ಎಂದರು.
ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿ ಮಾತನಾಡಿ ನುಡಿ ಸಂಭ್ರಮ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಮತಿ ಕೆ. , ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ, ಖಜಾಂಚಿ ದಯಾನಂದ ಆಳ್ವ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿಷೇಕ್, ಶ್ರೀಲಯ, ಸುಜನಾ ರೈ, ಕವಿತಾ ಕನ್ನಡ ಆಶಯ ಗೀತೆ ಹಾಡಿದ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ ಅನುರಾಧಾ ಕುರುಂಜಿ ಪ್ರಸ್ಸಾವನೆ ಗೈದು, ಐಕ್ಯೂಎಸಿ ಸಂಯೋಜಕಿ ಡಾ ಮಮತಾ ಕೆ ವಂದಿಸಿದರು. ವಿದ್ಯಾರ್ಥಿನಿ ಯಶಿತಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಕನ್ನಡ ಸಂಭಾಷಣೆ, ಕನ್ನಡ ಭುವನೇಶ್ವರಿ, ಕನ್ನಡ ಗೀತೆಗಳ ಗಾಯನ, ಕನ್ನಡ ಹಾಡಿಗೆ ನೃತ್ಯ, ಅಂತ್ಯಾಕ್ಷರಿ ಸ್ಪರ್ಧೆಗಳನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆಯೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಯಿತು. ಸಮಗ್ರ ತಂಡ ಪ್ರಶಸ್ತಿಯನ್ನು ವಿಜ್ಞಾನ ವಿಭಾಗ (ಪ್ರಥಮ), ಮತ್ತು ಕಲಾ ವಿಭಾಗ (ದ್ವಿತೀಯ) ಪಡೆದುಕೊಂಡಿತು. ಪ್ರತಿಯೊಂದು ಸ್ಪರ್ಧೆಗಳಲ್ಲೂ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ರೀತಿಯಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಕಾಲೇಜಿನ ಎಲ್ಲಾ ಬೋಧಕ – ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

















