ಕುಕ್ಕೆ ಸುಬ್ರಹ್ಮಣ್ಯಕ್ಕೆ ಚಿತ್ರನಟಿ ನಯನತಾರಾ ದಂಪತಿ ಭೇಟಿ
ಸುಬ್ರಹ್ಮಣ್ಯ: ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ. ಅವರು ಲೇಡಿ ಸೂಪರ್ ಸ್ಟಾರ್ ಎಂದೇ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರ ದಂಪತಿಗಳನ್ನ ಸನ್ಮಾನಿಸಿದರು.


















