HomeFresh Newsಕ್ರೀಡಾ ಚಟುವಟಿಕೆಗಳು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ: ಡಾ. ಪೊಡಿಯ

ಕ್ರೀಡಾ ಚಟುವಟಿಕೆಗಳು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ: ಡಾ. ಪೊಡಿಯ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 19ರಂದು ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸಾಧನೆಗೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ ಅಗತ್ಯ. ಉತ್ತಮ ಆಹಾರ ಮತ್ತು ದೈಹಿಕ ಚಟುವಟಿಕೆಗಳು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಅವಶ್ಯಕ. ಯುವ ಜನತೆ ಆರೋಗ್ಯವಂತರಾಗಿದ್ದರೆ ನಮ್ಮ ಮುಂದಿನ ಪೀಳಿಗೆ ಆರೋಗ್ಯಯುತವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿ ಕ್ರೀಡೋತ್ಸವಕ್ಕೆ ಶುಭಹಾರೈಸಿದರು.

ಸಭಾವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಧಾಕೃಷ್ಣ ಮಾಣಿಬೆಟ್ಟು, ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶಶ್ಮಿ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಕೆ ಟಿ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ನ್ಯಾಕ್ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರ ಕುಮಾರ್ ಎಂ ಎಂ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಮುದಾಸಿರ್ ಅತಿಥಿಗಳನ್ನು ಪರಿಚಯಿಸಿ, ಕ್ರೀಡಾ ಕಾರ್ಯದರ್ಶಿ ಕು. ಜೀಷ್ಮ ಪ್ರಮಾಣ ವಚನ ಬೋಧಿಸಿದರು. ಧನ್ಯವಾದ ಸಮರ್ಪಿಸಿದರು. ಕು. ಶ್ರೀಲಯ ಪ್ರಾರ್ಥಿಸಿ, ಕು. ಪ್ರತೀಕ್ಷ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಪಥಸಂಚಲನ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳು ದೈಹಿಕ ಶಿಕ್ಷಕರಾದ ಲೆ. ಸೀತಾರಾಮ ಎಂ. ಡಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರ ನೇತೃತ್ವದಲ್ಲಿ ನಡೆಯಿತು. ಉಪಸ್ಥಿತ ಗಣ್ಯರಿಂದ ವಿಜೇತರಿಗೆ ವಿಜಯ ವೇದಿಕೆಯಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಕ್ರೀಡೋತ್ಸವದ ಅಂಗವಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಕೆ. ಟಿ. ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್, ಕ್ರೀಡಾ ಕಾರ್ಯದರ್ಶಿ ವಿನಯ್ ಕುಮಾರ್ ಬೆದ್ರುಪಣೆ ಹಾಗೂ ಸಂಘದ ಪ್ರತಿನಿಧಿಗಳು ಮತ್ತು ಸದಸ್ಯರು ಭಾಗವಹಿಸಿದರು. ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments