ಡಿ.4 : ಬಬ್ಬುಕಟ್ಟೆ ಸರಕಾರಿ ಶಾಲೆಯಲ್ಲಿ ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.
ಅಂತರಾಷ್ಟ್ರೀಯ ಖ್ಯಾತಿಯ ದೇಹದಾರ್ಢ್ಯ ಪಟು, ಏಕಲವ್ಯ ಪ್ರಶಸ್ತಿ ವಿಜೇತ ಭಾಸ್ಕರ್ ತೊಕ್ಕೊಟ್ಟು ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸುವರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಕೈರುನ್ನೀಸಾ, ಉಳ್ಳಾಲ ಪುರಸಭೆ ಕೌನ್ಸಿಲರ್ ಮುಸ್ತಾಕ್ ಪಟ್ಲ , ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸುವಾಸಿನಿ ಬಬ್ಬುಕಟ್ಟೆ ಅತಿಥಿಯಾಗಿ ಭಾಗವಹಿಸುವರು. ಬಬ್ಬುಕಟ್ಟೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸವಿತಾ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು . ಹಿರಿಯ ಗಾಯಕ ಹಾಗೂ ಸಂಗೀತ ನಿರ್ದೇಶಕರಾದ ತೋನ್ಸೆ ಪುಷ್ಕಳ ಕುಮಾರ್ ಮತ್ತು ಸಂಗೀತ ಶಿಕ್ಷಕಿ ಶ್ರೀಮತಿ ವಾಣಿ ಸಪ್ರೆ ಸಂಪನ್ಮೂಲ ಕಲಾವಿದರಾಗಿ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.


















