ಹಿರಿಯ ಮದ್ದಲೆಗಾರ ಪದ್ಯಾಣ ಶಂಕರನಾರಾಯಣ ಭಟ್ ಗೆ 5 ನೇ ವಷ೯ದ ಶ್ರೀ ಹರಿಲೀಲಾ ಯಕ್ಷಗಾನ ಪ್ರಶಸ್ತಿ ಪ್ರದಾನ

ಮೂಡುಬಿದಿರೆ : ಇಲ್ಲಿನ ಅಲಂಗಾರು ಬಡಗುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಜಿ ಯಕ್ಷ ಫೌಂಡೇಶನ್ ವತಿಯಿಂದ ಮಂಗಳವಾರ ನಡೆದ ಶ್ರೀ ಹರಿಲೀಲಾ ಯಕ್ಷಗಾನದ ೫ನೇ ವರ್ಷದ ಪ್ರಶಸ್ತಿ ಪ್ರದಾನ ಮತ್ತು ಯಕ್ಷ ನಾದೋತ್ಸವವು ಮಂಗಳವಾರ ನಡೆಯಿತು.

ಅರ್ಥಧಾರಿ, ಯಕ್ಷಗಾನ ವಿಮರ್ಶಕ ಡಾ. ಎಂ. ಪ್ರಭಾಕರ ಜೋಶಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆಯ ಶಬ್ಧ ಹೆಚ್ಚುತ್ತಿದ್ದು ಇದರಿಂದಾಗಿ ಪಂಚವಾದ್ಯಗಳೂ ಮೂಲೆ ಗುಂಪಾಗುತ್ತಿದೆ ಅದರಲ್ಲೂ ಮದ್ದಲೆ ನೇಪಥ್ಯಕ್ಕೆ ಸರಿಯುತ್ತಿದ್ದು ಇದಕ್ಕೆ ಚೆಂಡೆಯೇ ಕಾರಣವಾಗಿದೆ. ಚೆಂಡೆಯ ಬಳಕೆಯನ್ನು ಮಿತಗೊಳಿಸದಿದ್ದರೆ ಭವಿಷ್ಯದಲ್ಲಿ ಮದ್ದಲೆಯು ಯಕ್ಷಗಾನದಿಂದ ಕಣ್ಮರೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಕಟೀಲಿನ ಶ್ರೀ ಹರಿನಾರಾಯಣದಾಸ ಅಸ್ರಣ್ಣ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು.

ಪ್ರಶಸ್ತಿ ಪ್ರದಾನ : ಯಕ್ಷಗಾನದ ಹಿರಿಯ ಮದ್ದಲೆಗಾರ ಪದ್ಯಾಣ ಶಂಕರನಾರಾಯಣ ಭಟ್ ಅವರಿಗೆ ೨೦೨೫ನೇ ಸಾಲಿನ ಹರಿಲೀಲಾ ಯಕ್ಷಗಾನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪತ್ನಿ ವನಜಾಕ್ಷಿ ಭಟ್ ಅವರನ್ನು ಗೌರವಿಸಲಾಯಿತು.

ಯಕ್ಷಗಾನ ಕಲಾವಿದ ವಾಸುದೇವ ರಂಗ ಭಟ್ ಅಭಿನಂದನಾ ಭಾಷಣ ಗಂಭಿರ ವ್ಯಕ್ತಿತ್ವ, ಸೌಂದರ್ಯದ ಮೂರ್ತರೂಪದಂತಿರುವ ಪದ್ಯಾಣ ಶಂಕರನಾರಾಯಣ ಭಟ್ ಯಕ್ಷಗಾನದ ಸ್ಟಾರ್ ಕಲಾವಿದರು. ಹಿಮ್ಮೇಳ ಕಲಾದವಿರಿಗೆ ಇವರು ಮಾದರಿ ಮತ್ತು ಆದರ್ಶರಾಗಿದ್ದಾರೆ. ಚೆಂಡೆ ಯಕ್ಷಗಾನದ ಭಾಗವಾಗಿ ಬಂದಿದ್ದು ಇದರ ಬಳಕೆಯ ಕುರಿತು ಅಭ್ಯಾಸಿ ವಲಯದಲ್ಲಿ ಚರ್ಚೆಯಾಗಲಿ ಎಂದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪದ್ಯಾಣ ಶಂಕರನಾರಾಯಣ ಭಟ್ ೪ ದಶಕಗಳ ಕಾಲ ಯಕ್ಷಗಾನ ತಿರುಗಾಟ ನಡೆಸಿದ್ದು ಕಲೆಗೆ ತನ್ನದೇ ಆದ ಕೊಡುಗೆ ನೀಡಿದ್ದೇನೆ. ಈ ಪ್ರಶಸ್ತಿಯು ಕಲೆಗೆ ಸಂದ ಗೌರವವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಕೆ. ಶ್ರೀಪತಿ ಭಟ್ ಭಾಗವಹಿಸಿ ಮಾತನಾಡಿದರು. ಡಿಜಿ ಯಕ್ಷ ಫೌಂಡೇಶನ್‌ನ ನಿರ್ದೇಶಕ ಅವಿನಾಶ್ ಬೈಪಡಿತ್ತಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈತ್ರಿ ಭಟ್ ಸನ್ಮಾನ ಪತ್ರ ವಾಚಿಸಿದರು. ಚೇತನ್ ಕತ್ತಲ್‌ಸಾರ್ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ ನಿರ್ವಹಿಸಿದರು.

Related Posts

Leave a Reply

Your email address will not be published.