ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಆಶ್ರಯದಲ್ಲಿ, ಪುತ್ತೂರು ತಾಲೂಕಿನ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಯಲ್ಲಿ ಈ ಸ್ಪರ್ಧೆ ನಡೆಯಿತು.
ವಿಜೇತೆಯಾದ ಕುಮಾರಿ ಪ್ರಣಮ್ಯಾ ಐ. ಅವರು ಚಾರ್ವಕ ಇಡ್ಯಡ್ಕ–ಕಜೆ ನಿವಾಸಿಗಳಾದ ಶ್ರೀ ಐ. ಗೋಪಾಲಕೃಷ್ಣ ಹಾಗೂ ಶ್ರೀಮತಿ ವಿಜಯ ದಂಪತಿಗಳ ಪುತ್ರಿಯಾಗಿರುತ್ತಾರೆ. ಈ ಶ್ರೇಷ್ಠ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿ, ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭಹಾರೈಸಿದ್ದಾರೆ.


















