ರಿಶಲ್ ಫೆರ್ನಾಂಡಿಸ್‌ಗೆ `ದೇಶ್ ರತ್ನಾ ಪ್ರಶಸ್ತಿ

ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೆಹಲಿಯಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಗೌರವವನ್ನು ನೀಡಲಾಗುತ್ತದೆ. ಈ ಹಿಂದೆ ಇವರು ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೂ ಪಾತ್ರರಾಗಿದ್ದರು.

Related Posts

Leave a Reply

Your email address will not be published.