ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26″ರ ಉದ್ಘಾಟನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕಟಪಾಡಿ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ.ಎ ಗೋಪಾಲಕೃಷ್ಣ ಭಟ್, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಅಧ್ಯಕ್ಷರಾದ ಮಂಜುನಾಥ ಭಟ್, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಉಪ ನಿರ್ದೇಶಕರಾದ ಮಾರುತಿ ಹಾಗೂ ಗಣ್ಯರು ಉಪಸ್ಥಿತರಿದ್ದರು.


















