ಮೂಡುಬಿದಿರೆ ತಾ.ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಆಯ್ಕೆ

ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೊಡೆ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳುವಾಯಿ ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಪುನೀತ್ ಆಯ್ಕೆಗೊಂಡಿದ್ದಾರೆ. ಮೂಡುಬಿದ್ರಿ ಪ್ರೆಸ್ ಕ್ಲಬ್ನಲ್ಲಿ ನಡೆದ ಇಂದಿನ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳಾದ ರಾಜೇಶ್ ಶೆಟ್ಟಿ ಚುನಾವಣಾ ಅಧಿಕಾರಿಯಾಗಿ ಹಾಗೂ ಕಿರಣ್ ಸಿರ್ಸಿಕರ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಸಹಕರಿಸಿದ್ದರು. ಪತ್ರಕರ್ತರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆಯಿತು.

Related Posts

Leave a Reply

Your email address will not be published.