ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಕೆ.ಎಸ್. ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಆಯ್ಕೆ
ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ 2025–28ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಬಾಲಕೃಷ್ಣ ಕೊಯಿಲ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚೆನ್ನಾವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕೇಶ್ ಬಿ.ಎನ್., ಕಾರ್ಯದರ್ಶಿಯಾಗಿ ಸುಧಾಕರ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರವೀಣ್ ರಾಜ್ ಕೊಯಿಲ ಅವರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಜಯ ಕುಮಾರ್, ರತ್ನಾಕರ, ಹರೀಶ್ ಬಿ, ನಾಗರಾಜ್ ಎನ್.ಕೆ., ಸ್ವಾತಿ ಕೆ.ವಿ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತ ಸಂಘದ ಪ್ರಕಾಶ್ ಕೊಡಿಂಬಾಳ, ದಿವಾಕರ ಎಂ., ತಸ್ಲೀಮ್ ಮರ್ದಾಳ ಉಪಸ್ಥಿತರಿದ್ದರು. ಚುನಾವಣಾಧಿಕಾರಿಯಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರಾದ ಲಕ್ಷ್ಮಿ ನಾರಾಯಣ ಅವರು ಆಗಮಿಸಿ ನಾಮಪತ್ರಗಳನ್ನು ಸ್ವೀಕರಿಸಿದರು. ಬಳಿಕ ಎಲ್ಲ ಹುದ್ದೆಗಳಿಗೆ ಅವಿರೋಧ ಆಯ್ಕೆ ನಡೆದ ಹಿನ್ನೆಲೆಯಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.


















