ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ
ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು.
ವಿದ್ಯಾರ್ಥಿಗಳನ್ನು, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ ಡಾ ಐಶ್ವರ್ಯ ಕೆ ಸಿ ಮತ್ತು ಶ್ರೀ. ಹೇಮನಾಥ್ ಕೆ ವಿ, ಕೋಶಾಧಿಕಾರಿಗಳಾದ ಡಾ. ಗೌತಮ್ ಗೌಡ, ಕೌನ್ಸಿಲ್ ಮೆಂಬರ್ ಗಳಾದ ಶ್ರೀ ಜಗದೀಶ್ ಅಡ್ತಲೆ, ಶ್ರೀಮತಿ ಮೀನಾಕ್ಷಿ ಕೆ ಹೆಚ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ


















