ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು

ಕ್ರೀಡಾ ಕೂಟಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು, ಉಡುಪಿಯ ಯುನೈಟೆಡ್ ಅಥ್ಲೆಟಿಕ್ಸನಾ ತರಬೇತುದಾರರಾದ ಶ್ರೀಮತಿ ಶ್ಯಾಲಿನಿ ರಾಜೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಸ್ವಾಭಾವಿಕ, ಅದನ್ನು ಎಲ್ಲರೂ ಕ್ರೀಡಾ ಸ್ಪೂರ್ತಿಯಿಂದ ಸ್ವೀಕರಿಸಬೇಕು. ಕ್ರೀಡಾಳುಗಳು ಅನಾರೋಗ್ಯಕರ ಆಹಾರಗಳಿಂದ ದೂರವಿದ್ದು , ಪೌಷ್ಟಿಕಾಂಶ ಇರುವ ಆಹಾರ ಸೇವನೆಯಿಂದ ಉತ್ತಮ ಕ್ರೀಡಾಪಟು ಆಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿಯ ಉಪನಿರ್ದೇಶಕರಾದ ಡಾ. ರೋಷನ್ ಕುಮಾರ್ ಶೆಟ್ಟಿಯವರು ಮಾತನಾಡಿ ಹಿಂದೆ ಕ್ರೀಡಾಳುಗಳಿಗೆ ಉತ್ತಮ ಸೌಲಭ್ಯಗಳು ಇರಲಿಲ್ಲ, ಈಗ ಎಲ್ಲಾ ಸೌಲಭ್ಯಗಳು ಇರುವುದರಿಂದ ಅದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಕ್ರೀಡಾಪಟುಗಳಾಗಿ ದೇಶಕ್ಕೆ ಕೀರ್ತಿ ತರುವಂತೆ ಹಾರೈಸಿದರು.

ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ಮಾತನಾಡಿ ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕ ದೃಢತೆಯನ್ನು ಮೂಡಿಸುತ್ತದೆ.
ವಿದ್ಯಾರ್ಥಿಗಳು ಬಹುಮಾನ ಗಳಿಸುವುದಕಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಕರು ಆದ ನಾಡೋಜ ಡಾಕ್ಟರ್ ಕೃಷ್ಣಪ್ರಸಾದ್ ಕೂಡ್ಲು ಮಾತನಾಡಿ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯವಾಗಿದ್ದು,ಕ್ರೀಡಾಪಟುಗಳು ದುಶ್ಚಟಗಳಿಂದ ದೂರ ಇರುವಂತೆ ಸಲಹೆ ನೀಡಿದರು.ಕಲಿತ ಶಾಲೆ, ಕಳಿಸಿದ ಗುರುಗಳು ಮತ್ತು ಸಾಕಿ ಸಲಹಿದ ತಂದೆ ತಾಯಿಯಯನ್ನು ಯಾವಾಗಲೂ ಮರೆಯಬಾರದು ಎಂದರು.

ವೇದಿಕೆಯಲ್ಲಿ ಕಾಲೇಜಿನ ಸಿ ಓ ಓ ಡಾಕ್ಟರ್ ಗೌರಿ ಪ್ರಭು ಉಪಸ್ತಿತರಿದ್ದರು. ಉಪನ್ಯಾಸಕಿ ಶ್ರೀನಿಧಿ ಸ್ವಾಗತಿಸಿ, ಉಪನ್ಯಾಸಕಿ ಮೇಘನಾ ವಂದಿಸಿದರು. ಉಪನ್ಯಾಸಕಿ ಅಶೆಲ್ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related Posts

Leave a Reply

Your email address will not be published.