ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಧರಣಿ-ಸತ್ಯಾಗ್ರಹ
ಕಾಪು: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ-ಸತ್ಯಾಗ್ರಹ ನಡೆಯುತ್ತಿದ್ದು, ಇಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿಯನ್ನು ಸ್ವೀಕರಿಸಿದರು.
















