ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ
ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರರಂಗದ ನಟ ಕುಮಾರ್ ಬಂಗಾರಪ್ಪ ಅವರು ಪತ್ನಿ ಸಮೇತ ಮಕ್ಕಳ ಜೊತೆ ದಿನಾಂಕ 17 ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ನೀಡಿದ ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


















