ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ
ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಯಾರು ಮುಖ್ಯ ರಸ್ತೆಯಿಂದ ಬಬ್ಬುಸ್ವಾಮಿ ರಸ್ತೆ ಅಭಿವೃದ್ಧಿ – 10 ಲಕ್ಷ, ಪಡು ಗುಡ್ಡೆ ಸುಧಾಕರ್ ಕುಲಾಲ್ ತಾಂಡೂರು ರಸ್ತೆ ಅಭಿವೃದ್ಧಿ – 10 ಲಕ್ಷ, ಕಳತ್ತೂರು ಮುಖ್ಯ ರಸ್ತೆಯಿಂದ ಉದಯ ಭಟ್ರ ಮನೆ ತನಕ ರಸ್ತೆ ಅಭಿವೃದ್ಧಿ – 10 ಲಕ್ಷ, ಕಳತ್ತೂರು ಕಕ್ಕುಂಜೆ ಪೇಡೆ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಕುತ್ಯಾರು ಮಲಂಗೊಳಿ ಸುಧಾಕರ್ ಕುಲಾಲ್ ಮನೆಯಿಂದ ಸುಶೀಲಾ ಮೂಲ್ಯಾ ಅವರ ಮನೆ ತನಕ ರಸ್ತೆ ಅಭಿವೃದ್ಧಿ – 10 ಲಕ್ಷ ಸೇರಿದಂತೆ ಒಟ್ಟು 50 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಸದಸ್ಯರಾದ ಗಣೇಶ್ ಶೆಟ್ಟಿ ಪೈಯಾರು, ಇವ್ಜಿನ್ ಲೋಬೋ, ಸ್ಟ್ಯಾನ್ಲಿ ಕೊಡ್ದಾ, ಸ್ಥಳೀಯರಾದ ಸಂಜೀವ ಕುಲಾಲ್, ಉದಯ್ ಕುಲಾಲ್, ರಾಜೇಶ್ ಕುಲಾಲ್ ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.


















