HomeFresh Newsಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮಣ್ಣು ಸಾಗಾಣಿಕೆ ಕುರಿತಂತೆ ಸಭೆ

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮಣ್ಣು ಸಾಗಾಣಿಕೆ ಕುರಿತಂತೆ ಸಭೆ

ಕಾಪು:ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಟಿಪ್ಪರ್ ಮಣ್ಣನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಟಿಪ್ಪರ್ ಗಳನ್ನು ಆಡ್ಡಗಟ್ಟುತ್ತಿರುವುದರಿಂದ ನೈಜ ರೈತರು ಹಲವಾರು ಕಡೆ ಸಮಸ್ಯೆ ಎದುರಿಸುತ್ತಿದ್ದು ಈ ಸಂಬಂಧ ಇಂದು ದಿನಾಂಕ 23-02-2026 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಂಧ್ಯಾ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments