HomeFresh Newsಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್...

ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ

ಕಾಪು: ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ಕಂಬಳ ನಡೆಯಲ್ಲಿದ್ದು ಇದರ ಪೂರ್ವಭಾವಿ ಸಭೆ ದಿನಾಂಕ 23-02-2026 ಸೋಮವಾರ ದಂದು ಶಾಂಭವಿ ಹೋಟೆಲ್ ನಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ ಸಮಾರಂಭ ಇದೇ ತಿಂಗಳ 28 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕರು, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಂಬಳ ಕೋಣದ ಯಜಮಾನರಾದ ನಂದಳಿಕೆ ಶ್ರೀಕಾಂತ್ ಭಟ್, ಕೊಳಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ, 80 ಬಡಗುಬೆಟ್ಟು ಬ್ರಹ್ಮಬೈದರ್ಕಳ ಗರೋಡಿ ಮೊಕ್ತೇಸರರಾದ ಅರುಣಾಚಲ ಹೆಗ್ಡೆ, ಶ್ರೀ ವೈಶ್ಣವಿ ದುರ್ಗಾ ದೇವಸ್ಥಾನ ಮೊಕ್ತೇಸರರಾದ ಜಯರಾಜ್ ಹೆಗ್ಡೆ, ಉದ್ಯಮಿಗಳಾದ ಶಿವಪ್ರಸಾದ್ ಹೆಗ್ಡೆ, ರಾಜ್ಯ ಕಂಬಳ ಸಮಿತಿಯ ಸದಸ್ಯರಾದ ವಿಜಯ್ ಕುಮಾರ್ ಕಂಗಿನಮನೆ ಹಾಗೂ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿಯ ಪದಾಧಿಕಾರಿಗಳು ಮತ್ತು ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments