ದುಬೈ ಸೇರಿ ಗಲ್ಫ್‌ ದೇಶಗಳಲ್ಲಿನ ಭಾರತೀಯರಿಗೆ ಮಾರ್ಗಸೂಚಿ ಬಿಡುಗಡೆ

ದುಬೈ: ಇರಾನ್‌, ಸೌದಿ ಅರೇಬಿಯಾ, ಯುಎಇ ಮತ್ತು ಜೋರ್ಡನ್ ಸೇರಿದಂತೆ ಗಲ್ಫ್‌ ರಾಷ್ಟ್ರಗಳಲ್ಲಿನ ಭಾರತೀಯರು ಎಚ್ಚರಿಕೆಯಿಂದ ಇರುವಂತೆ ಮತ್ತು ಸ್ಥಳೀಯಾಡಳಿತಗಳ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅಲ್ಲಿರುವ ಭಾರತದ ರಾಯಭಾರ ಕಚೇರಿಗಳು ಮನವಿ ಮಾಡಿವೆ.

ಇಸ್ರೇಲ್‌ನಲ್ಲಿನ ರಾಯಭಾರ ಕಚೇರಿಯು ಈ ಕುರಿತಂತೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅನಗತ್ಯ ಪ್ರಯಾಣ ಮಾಡದಂತೆ, ಮನೆಯಲ್ಲಿಯೇ ಜಾಗರೂಕತೆಯಿಂದ ಇರಬೇಕು ಎಂದು ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಜೋರ್ಡನ್‌ನಲ್ಲಿರುವ ಭಾರತೀಯ ಪ್ರವಾಸಿಗರು ವಾಣಿಜ್ಯ ವಿಮಾನಗಳ ಸಂಚಾರ ಸ್ಥಗಿತಗೊಳ್ಳುವ ಮುನ್ನ ದೇಶವನ್ನು ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇಯು ಮಾರ್ಗಸೂಚಿಯಲ್ಲಿ ತಿಳಿಸಿದೆ.

Related Posts

Leave a Reply

Your email address will not be published.