ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು ಸಾಧ್ಯ. ಮುಂದಿನ ದಿನಗಳಲ್ಲಿ ನಮ್ಮ ನೇತ್ರ ಜ್ಯೋತಿ ಕಾಲೇಜಿನಲ್ಲಿ ಓದಿದ ವಿಧ್ಯಾರ್ಥಿಗಳು ಸಾಧನೆಯನ್ನು ಮಾಡಿ ಸನ್ಮಾನ ಸ್ವೀಕರಿಸುವಂತಾಗಬೇಕು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ರವರು ಮಹಿಳೆಯರು ಈಗ ಅಬಲೆ ಅಲ್ಲ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆ ಅಮೋಘವಾದುದು. ಪುರುಷರ ಏಳಿಗೆಯಲ್ಲಿ ಮಹಿಳೆಯ ಪಾತ್ರ ಯಾವತ್ತೂ ಇರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ರವರು ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು, ಪ್ರತಿ ದಿನವೂ ಮಹಿಳೆಯರಿಗೆ ಗೌರವ ನೀಡುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶ್ರೀಮತಿ ಅಮೃತ ಕೃಷ್ಣಮೂರ್ತಿ, ಶ್ರೀಮತಿ ಅರುಣಾಕಲ, ಶ್ರೀಮತಿ ಅನಿತಾ ಬಾಳಿಗ, ಡಾ. ಕಾಂತಿ ಹರೀಶ್, ಡಾ. ಅರ್ಚನಾ ಎಂ ವಿ, ಡಾ. ಶ್ರುತಿ ಬಲ್ಲಾಳ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಸಿ ಓ ಓ ಡಾ ಗೌರಿ ಪ್ರಭು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರಾವ್ಯ ಸಂಗಡಿಗರು ಪ್ರಾರ್ಥಿಸಿದರು, ಮಾಧವ ಪೂಜಾರಿಯವರು ಸ್ವಾಗತಿಸಿ ನಿರೂಪಿಸಿದರು. ವಿಧ್ಯಾರ್ಥಿ ಚರಣರಾಜ್ ವಂದಿಸಿದರು.


















