HomeFresh Newsಸರಸ್ವತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಡಬ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ.100 ಸಾಧನೆ

ಸರಸ್ವತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಡಬ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ.100 ಸಾಧನೆ


ಕಡಬ: ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.
ಒಟ್ಟು 14 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 09 ಮಂದಿ ಡಿಸ್ಟಿಂಕ್ಷನ್, 04 ಮಂದಿ ಪ್ರಥಮ ಶ್ರೇಣಿ ಹಾಗೂ 02 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ನಿಧಿ ಕೆ.ಸಿ. ಅವರು 606 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೇಕ್ಷ ಪಿ.ಎಂ. ಅವರು 605 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಪ್ರಣಮ್ಯ ಐ. ಅವರು 597 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿ ವೃಂದದಿಂದ ಅಭಿನಂದನೆಗಳು ವ್ಯಕ್ತವಾಗಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments