Homeರಾಜ್ಯಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್..! ನಿಯಮ ಮೀರಿದರೆ ಶಿಕ್ಷಕರು, ಆಡಳಿತ ಮಂಡಳಿ...

ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್..! ನಿಯಮ ಮೀರಿದರೆ ಶಿಕ್ಷಕರು, ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮ

ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡು ಹಾಗೂ ನೃತ್ಯಗಳ ಪ್ರದರ್ಶನ ಹೆಚ್ಚಾಗುತ್ತಿರುವುದಕ್ಕೆ ಶಿಕ್ಷಣ ಇಲಾಖೆ ಈಗ ಬ್ರೇಕ್ ಹಾಕಿದೆ. ಈ ಸಂಬAಧ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಅನ್ವಯವಾಗುವಂತೆ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.


ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ನೀಡಿರುವ ಆದೇಶದಲ್ಲಿ, ಮಕ್ಕಳ ಮೇಲೆ ಅಶ್ಲೀಲ ಹಾಡುಗಳು ಕೆಟ್ಟ ಪರಿಣಾಮ ಬೀರುತ್ತಿವೆ ಮತ್ತು ಇದು ಶಿಕ್ಷಣದ ಪಾವಿತ್ರ‍್ಯತೆಗೆ ಧಕ್ಕೆ ತರುತ್ತಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ದೂರಿನ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.


ಇಲಾಖೆ ನೀಡಿರುವ ೫ ಪ್ರಮುಖ ಗೈಡ್‌ಲೈನ್ಸ್ ಯಾವುದು..?

1. ಅಶ್ಲೀಲತೆಗೆ ಕಟ್ಟುನಿಟ್ಟಿನ ನಿಷೇಧ: ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ಅಶ್ಲೀಲ ಹಾಡು ಅಥವಾ ನೃತ್ಯಗಳನ್ನು ಪ್ರದರ್ಶಿಸುವಂತಿಲ್ಲ.
2. ರಾಷ್ಟ್ರಾಭಿಮಾನಕ್ಕೆ ಆದ್ಯತೆ: ಮಕ್ಕಳಿಗೆ ಸ್ಫೂರ್ತಿ ನೀಡುವ, ಕನ್ನಡ ನಾಡಿನ ಹಿರಿಮೆ-ಗರಿಮೆ ಸಾರುವ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಹಾಡುಗಳನ್ನೇ ಆಯ್ಕೆ ಮಾಡಬೇಕು.
3. ಸಭ್ಯ ಉಡುಪು ಕಡ್ಡಾಯ: ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸಭ್ಯ ಉಡುಪುಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
4. ಹೊಣೆಗಾರಿಕೆ: ಹಾಡು ಮತ್ತು ನೃತ್ಯಗಳ ಆಯ್ಕೆಯಲ್ಲಿ ಯಾವುದೇ ತಪ್ಪುಗಳು ಸಂಭವಿಸಿದರೆ ಅದಕ್ಕೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯೇ ನೇರ ಹೊಣೆಯಾಗಲಿದೆ.
5. ಕಾನೂನು ಕ್ರಮ: ಒಂದು ವೇಳೆ ಸುತ್ತೋಲೆಯನ್ನು ಉಲ್ಲಂಘಿಸಿ ಅಶ್ಲೀಲ ನೃತ್ಯಗಳಿಗೆ ಅವಕಾಶ ನೀಡಿದರೆ ಸಂಬAಧಪಟ್ಟವರ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಜರುಗಿಸಲಾಗುವುದು.

    RELATED ARTICLES

    LEAVE A REPLY

    Please enter your comment!
    Please enter your name here

    Most Popular

    Recent Comments