ಕಾಪು:ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಉಡುಪಿ ಜಿಲ್ಲೆ ವತಿಯಿಂದ ದಿನಾಂಕ 15-05-2026 ರಿಂದ 16-05-2026 ರ ವರೆಗೆ ಕಳತ್ತೂರು ಕುಶಲಶೇಖರ ಶೆಟ್ಟಿ ಹಾಲ್ ನಲ್ಲಿ ನಡೆಯುತ್ತಿರುವ “ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026” ಇದರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
