HomeFresh Newsಮೂಡುಬಿದಿರೆ "ಪತ್ರಿಕಾ ಭವನ" ಕ್ಕೆ ಮುಖ್ಯಮಂತ್ರಿಗಳಿಂದ ರೂ. 25 ಲಕ್ಷ ಅನುದಾನ ಮಂಜುರಾತಿಗೆ ಆದೇಶ

ಮೂಡುಬಿದಿರೆ “ಪತ್ರಿಕಾ ಭವನ” ಕ್ಕೆ ಮುಖ್ಯಮಂತ್ರಿಗಳಿಂದ ರೂ. 25 ಲಕ್ಷ ಅನುದಾನ ಮಂಜುರಾತಿಗೆ ಆದೇಶ

ಮೂಡುಬಿದಿರೆ : ಇಲ್ಲಿನ ಪೇಟೆಯ ಹೃದಯ ಭಾಗದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮೂಡುಬಿದಿರೆ ಪ್ರೆಸ್ ಕ್ಲಬ್ ವತಿಯಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪತ್ರಿಕಾ ಭವನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ 25 ಲಕ್ಷ ರೂಪಾಯಿ ಅನುದಾನ ಮಂಜೂರಾತಿಗೆ ಆದೇಶ ನೀಡಿದ್ದಾರೆ. ಮೂಡುಬಿದಿರೆ ಪ್ರೆಸ್‌ಕ್ಲಬ್ ನಿಯೋಗವು ಜನವರಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ನೂತನ ಪತ್ರಿಕಾ ಭವನಕ್ಕೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ವಾರ್ತಾ ಮತ್ತು ಪ್ರಚಾರ ನಿರ್ದೇಶನಾಲಯಕ್ಕೆ ಒದಗಿಸಲಾದ ಅನುದಾನದಿಂದ ಪತ್ರಿಕಾ ಭವನ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಆಡಳಿತ ಇಲಾಖೆಗೆ ಆದೇಶ ನೀಡಿದ್ದಾರೆ ಎಂದು ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments