ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇದರ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಖಡಾ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಇಂದು ದಿನಾಂಕ 26-05-2026 ರಂದು ಹಮ್ಮಿಕೊಳ್ಳಲಾದ “ಅಭಿನಂದನಾ ಸಮಾರಂಭ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 5 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಇಂಟರ್ ಲಾಕ್ ಕಾಮಗಾರಿ ಹಾಗೂ ಶಾಲೆಯ ಮೂಲಭೂತ ಸೌಕರ್ಯಗಳನ್ನು ಶಾಸಕರು ಉದ್ಘಾಟಿಸಿದರು.
ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸೌಮಲತಾ ಶೆಟ್ಟಿ, ಮಾಜಿ ಉಪಾಧ್ಯಕ್ಷರಾದ ರಾಯೇಶ್ ಪೈ, ಮಾಜಿ ಸದಸ್ಯರಾದ ಗಾಯತ್ರಿ ಪ್ರಭು, ಪ್ರವೀಣ್ ಪೂಜಾರಿ, ಸುಜಾತಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರಾಂಶುಪಾಲರಾದ ಗ್ರೇಟ್ಟಾ ಡಿ’ಸೋಜಾ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಮಾಧವ ಸಾಲ್ಯಾನ್, ಹಳೆ ವಿದ್ಯಾರ್ಥಿ ದಾನಿಗಳಾದ ಪ್ರಭಾ ನಂಬಿಯಾರ್ ಹಾಗೂ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
