ರಾಜ್ಯ ರಾಜಕಾರಣದಲ್ಲಿ ಕಳೆದ ಮೂರು ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ಕುರ್ಚಿ ಬದಲಾವಣೆ ಪ್ರಹಸನ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರಿನ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಹೈ-ವೋಲ್ಟೇಜ್ ಉಪಾಹಾರ ಕೂಟದಲ್ಲಿ ಅತ್ಯಂತ ಅಪರೂಪದ ಹಾಗೂ ಭಾವನಾತ್ಮಕ ಸನ್ನಿವೇಶವೊಂದು ಸಾಕ್ಷಿಯಾಗಿದೆ.

ಸಭೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು, ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ದೃಶ್ಯ ಸದ್ಯ ಕೈ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

