ಬೈಂದೂರು:ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಪರಿಕಲ್ಪನೆಯಲ್ಲಿ SC-ST ಯವ ಉದ್ಯಮಶೀಲತೆ ದಿಕ್ಸೂಚಿ ನೀಡುವ ನಿಟ್ಟಿನಲ್ಲಿ ಇಂದು ದಿನಾಂಕ 30-05-2026 ರಂದು ಹೆಮ್ಮಾಡಿ ಜಯಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ “ಭಿಮೋದ್ಯಮ – 2026” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ರಾಜ್ಯ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾದ ದಿನಕರ್ ಬಾಬು, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಅನಿತಾ ಮರವಂತೆ ಹಾಗೂ ಗಣ್ಯರು ಉಪಸ್ಥಿತರಿದ್ದರು
