HomeFresh Newsದಿ.ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಕೆಡವಿದ್ದಕ್ಕೆ ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಖಂಡನೆ

ದಿ.ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ಕೆಡವಿದ್ದಕ್ಕೆ ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಖಂಡನೆ

ದಿವಂಗತ ಮುಲ್ಕಿ ಸುಂದರ್ ರಾಮ ಶೆಟ್ಟಿ ಅವರು ಕರಾವಳಿಯ ಹೆಮ್ಮೆಯ ಪುತ್ರ, ಕರಾವಳಿ ಭಾಗದ ಹಳ್ಳಿಯ ಯುವಕ, ಯುವತಿಯರಿಗೆ ಸರಿಸುಮಾರು ಹತ್ತು ಸಾವಿರ ಉದ್ಯೋಗವನ್ನು ಸೃಷ್ಟಿಸುವ ಮೂಲಕ ಉದ್ಯೋಗದಾತರಾಗಿ ಹಲವರ ಬಾಳಿಗೆ ದಾರಿದೀಪವಾಗಿದ್ದಾರೆ.

ವಿಜಯ ಬ್ಯಾಂಕ್ ನ್ನು ಪ್ರಪಂಚಾದ್ಯಂತ ತೆರೆಯುವ ಮೂಲಕ ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಟ್ಟು ಉದ್ಯಮಿಗಳು ಹಾಗೂ ಜನಸಾಮಾನ್ಯರಿಗೆ ನೆರವಾಗಿ ಒಂದು ರೀತಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ, ಅಂತಹ ಮಹಾನ್ ವ್ಯಕ್ತಿತ್ವದ ಶ್ರೀಯುತರ ಸ್ಮಾರಕವನ್ನು ಏಕಾಏಕಿಯಾಗಿ ಕೆಡವಿದ್ದು ಖಂಡನೀಯ.


ಸರಕಾರ ಹಾಗೂ ಜನಪ್ರತಿನಿಧಿಗಳು ಕೂಡಲೇ ಸರಕಾರಿ ಜಾಗದಲ್ಲಿ ಅವರ ಸ್ಮಾರಕವನ್ನು ನಿರ್ಮಿಸಿ, ಅವರಿಗೆ ಗೌರವ ಸಲ್ಲಿಸುವಂತಹ ಕೆಲಸವನ್ನು ಮಾಡಬೇಕು ಎಂದು ಪ್ರಕಟಣೆಯಲ್ಲಿ ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments