HomeFresh Newsಕಾಪು ತಾಲೂಕಿನ SVS ಕಾಲೇಜಿನಲ್ಲಿ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಕಾಪು ತಾಲೂಕಿನ SVS ಕಾಲೇಜಿನಲ್ಲಿ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಕಾಪು: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಸ್ ವಿ ಎಸ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ ಉದ್ಘಾಟಿಸಿ, ಶುಭ ಹಾರೈಕೆ ಮಾಡಿದರು.

ಕಾಪು ಪೊಲೀಸ್ ನಿರೀಕ್ಷರಾದ ತೇಜಸ್ವಿ ಅವರು ವೀಡಿಯೊ ಚಿತ್ರಣದ ಮೂಲಕ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ರವರು ವಿದ್ಯಾರ್ಥಿಗಳಿಗೆ ಪೋಷಕರಿಗೆ ದುಷ್ಟಟ ವಿರುದ್ಧ ಜಾಗೃತಿ ಮೂಡಿಸುವ ಮಾಹಿತಿ ಜೊತೆಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯೇoದ್ರ ಪೈ, ಕಾಪು ಪೊಲೀಸ್ ಠಾಣೆಯ ಉಪ ಠಾಣಾಧಿಕಾರಿ, ಯೋಜನಾಧಿಕಾರಿ ಮಮತ ಶೆಟ್ಟಿ, ಶಿಕ್ಷಕ ವೃಂದ ಹಾಗೂ ಆಡಳಿತಧಿಕಾರಿ ದೇವೇಂದ್ರ ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments