HomeFresh Newsಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹29ರಷ್ಟು ಏರಿಕೆ

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹29ರಷ್ಟು ಏರಿಕೆ

ಗೃಹಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ 29 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಗೃಹಬಳಕೆಯ ಅಡುಗೆ ಅನಿಲ ದುಬಾರಿಯಾದಂತಾಗಿದೆ. ಈ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಎಲ್‌ಪಿಜಿ ದರ 913 ರೂಪಾಯಿಯಿಂದ 942 ರೂಪಾಯಿಗೆ ಹೆಚ್ಚಿದಂತಾಗಿದೆ.

ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವ ನಡುವೆಯೇ ಅನಿಲ ಬೆಲೆಯನ್ನು ಹೆಚ್ಚಿಸಲಾಗಿದೆ. ಈ ಪರಿಷ್ಕರಣೆ ದೇಶಾದ್ಯಂತ ಜೂನ್ 7ರಿಂದಲೇ ಜಾರಿಗೆ ಬರಲಿದ್ದು, ಸ್ಥಳೀಯ ತೆರಿಗೆಗಳು ಮತ್ತು ಸಾಗಾಣಿಕೆ ವೆಚ್ಚದಿಂದಾಗಿ ಬೇರೆ ಬೇರೆ ನಗರಗಳಲ್ಲಿ ಚಿಲ್ಲರೆ ಮಾರಾಟ ದರ ವ್ಯತ್ಯಯವಾಗಲಿದೆ.

ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆಗೆ ಧಕ್ಕೆ ಉಂಟಾದ ಹಿನ್ನೆಲೆಯಲ್ಲಿ ಮಾರ್ಚ್ 7ರಂದು ಎಲ್‌ಪಿಜಿ ಸಿಲಿಂಡರ್ ದರವನ್ನು 60 ರೂಪಾಯಿ ಹೆಚ್ಚಿಸಲಾಗಿತ್ತು. ಆದರೆ ಈ ಹೆಚ್ಚಳ ಎಲ್‌ಪಿಜಿ ದೇಶೀಯ ಮಾರಾಟದಿಂದ ಉಂಟಾಗುತ್ತಿರುವ ಒಟ್ಟು ನಷ್ಟದ ಒಂದು ಭಾಗ ಮಾತ್ರ ಆಗಿದೆ ಎಂದು ಉದ್ಯಮ ಮೂಲಗಳು ಹೇಳಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments