ಕಿನ್ನಿಗೋಳಿ: ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕಿನ್ನಿಗೋಳಿಯಲ್ಲಿ ನೃತ್ಯ ತರಗತಿಯ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಗುರುರಾಜ್ ಮಲ್ಲಿಗೆಂಗಡಿಯವರು ನೆರವೇರಿಸಿ, ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ನೃತ್ಯದಂತಹ ಕಲಾ ಪ್ರಾಕಾರಗಳೂ ಅಗತ್ಯವಾಗಿವೆ. ನೃತ್ಯವು ಮಕ್ಕಳ ಮಾನಸಿಕ ಸ್ಥಿರತೆಯನ್ನು ಕಾಪಾಡುವುದರ ಜೊತೆಗೆ ಆತ್ಮವಿಶ್ವಾಸ, ಶಿಸ್ತು ,ದೈಹಿಕ ಮತ್ತು ಮಾನಸಿಕ ಸ್ಥಿರತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವತಿಯಿಂದ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಕಿನ್ನಿಗೋಳಿಯ ಹಿರಿಯ ಸದಸ್ಯರಾದ ರೋ. ಸತೀಶ್ ಚಂದ್ರ ಹೆಗ್ಡೆ ಅವರು ಮಾತನಾಡಿ, ರೋಟರಿ ಸಂಸ್ಥೆಯು ಕಳೆದ 39 ವರ್ಷಗಳಿಂದ ಈ ವಿದ್ಯಾಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿರುವ ಬಗ್ಗೆ ವಿವರಿಸಿದರು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಸಂಸ್ಥೆ ನಿರಂತರವಾಗಿ ಹಮ್ಮಿಕೊಳ್ಳುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ರೋ. ಪ್ರವೀಣ್ ಸಾಲ್ಯಾನ್, ರೋ. ಹರೀಶ್ ಶೆಟ್ಟಿ, ಆಡಳಿತಾಧಿಕಾರಿ ಭರತ್ ಕುಮಾರ್ ಹಾಗೂ ನೃತ್ಯ ತರಬೇತುದಾರರಾದ ಬಬಿತಾ ನರೇಶ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಸುನಿತಾ ಗುರುರಾಜ್ ಅವರು ಅತಿಥಿಗಳನ್ನು ಸ್ವಾಗತಿಸಿ, ಶುಭಲಕ್ಷ್ಮಿಯವರು ವಂದನಾರ್ಪಣೆಗೈ ದು, ಶಿಕ್ಷಕಿ ಪ್ರತಿಮ ಕಾರ್ಯಕ್ರಮವನ್ನು ನಿರೂಪಿಸಿದರು.


