HomeFresh Newsಜೂನ್ 21ರಂದು ಮೂಡುಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಜೂನ್ 21ರಂದು ಮೂಡುಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡುಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಜೂನ್ 21ರಂದು ಬೆಳಗ್ಗೆ 10.30ಕ್ಕೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ.

ಸಭೆಯ ಮುಖ್ಯ ಕಾರ್ಯಸೂಚಿಯಾಗಿ 2026-27ನೇ ಸಾಲಿನ ಕಂಬಳಗಳಿಗೆ ದಿನ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ. ಕಂಬಳಗಳ ಆಯೋಜನೆ, ನಿಯಮ ಮತ್ತು ಸಮಯ ಪಾಲನೆ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗುತ್ತದೆ. ಜಿಲ್ಲಾ ಕಂಬಳ ಸಮಿತಿ ಅಧೀನದಲ್ಲಿ ನಡೆಯುವ ಅಧಿಕೃತ ಕಂಬಳಗಳಿಗೆ ಸರ್ಕಾರದ ಅನುದಾನ ಒದಗಿಸಲು ಸರ್ಕಾರದ ಆದೇಶದಂತೆ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಲಾಗುತ್ತದೆ. ತೀರ್ಪುಗಾರರು, ಕೋಣಗಳ ಓಡಿಸುವವರಿಗೆ ನಿರಂತರ ಕಾರ್ಯಾಗಾರ ನಡೆಸುವುದು ಹಾಗೂ ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಮತ್ತು ಎರಡು ಭಾವಚಿತ್ರಗಳನ್ನು ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ನೂತನ ಪದಾಧಿಕಾರಿಗಳ ಆಯ್ಕೆಯು ಕಂಬಳ ಸಮಿತಿಯ ಸದಸ್ಯತ್ವ ಹೊಂದಿದವರಿಂದ ಮಾತ್ರ ನಡೆಯುತ್ತದೆ. ಕಂಬಳ ಸಮಿತಿ ತಾಲೂಕು, ಕಾಸರಗೋಡು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments