ಉಡುಪಿ:
ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ (ರಿ) ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಉದ್ಯಮಶೀಲತೆಯ ಮೂಲಕ ಗ್ರಾಮೀಣಾಭಿವೃದ್ಧಿ” ಎಂಬ ಧ್ಯೇಯದೊಂದಿಗೆ ನಡೆಸಲಾಗುತ್ತಿರುವ ಉದ್ಯೋಗ ಆಧಾರಿತ ಕಾರ್ಯಕ್ರಮದಡಿ, ಒಂದು ತಿಂಗಳ ಡಿಜಿಟಲ್ ಸಾಕ್ಷರತಾ ಕಂಪ್ಯೂಟರ್ ತರಬೇತಿ ಕಾರ್ಯಕ್ರಮದ 21ನೇ ಬ್ಯಾಚ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭವು 2026ರ ಜೂನ್ 20ರಂದು ಮಧ್ಯಾಹ್ನ 3.30 ಗಂಟೆಗೆ ಕೌಶಲ್ಯ ಅಭಿವೃದ್ಧಿ ಕೇಂದ್ರ, “ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್”, ಮೊದಲ ಮಹಡಿ, ಕುಂತಲನಗರ, ಮಣಿಪುರ ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಎನ್ಎಂಎಎಂ ತಂತ್ರಜ್ಞಾನ ಸಂಸ್ಥೆ, ನಿಟ್ಟೆಯ ಸಮಾಲೋಚನೆ, ಕಲ್ಯಾಣ, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ಭರತ್ ಜಿ. ಕುಮಾರ್ ಉದ್ಘಾಟಿಸಲಿದ್ದಾರೆ.
ಉಡುಪಿ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಶೆಟ್ಟಿ ಹಾಗೂ ಉಜ್ವಲ್ ಡೆವಲಪರ್ಸ್, ಉಡುಪಿ ಇದರ ಮಾಲಕರಾದ ಶ್ರೀ ಅಜಯ್ ಪಿ. ಶೆಟ್ಟಿ ಅವರು ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಶೆಟ್ಟಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸ್, ಉಡುಪಿ ಇದರ ಪ್ರಭಾರ ಪ್ರಾಂಶುಪಾಲರಾದ ಶ್ರೀ ರವಿ ಕೋಟ್ಯಾನ್, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷರಾದ ಡಾ. ಎಚ್.ಬಿ. ಶೆಟ್ಟಿ, ಟ್ರಸ್ಟಿಗಳು ಹಾಗೂ ಮಾಜಿ ಅಧ್ಯಕ್ಷರಾದ ಶ್ರೀ ಎ. ಶ್ರೀಧರ ಶೆಟ್ಟಿ ಮತ್ತು ಶ್ರೀ ಹೇಮಂತ್ ಶೆಟ್ಟಿ, ಟ್ರಸ್ಟಿಯಾದ ಶ್ರೀ ಜಗದೀಶ್ ಹೆಗ್ಡೆ ಭಾಗವಹಿಸಲಿದ್ದಾರೆ.
ಸಂಘದ ಕಾರ್ಯದರ್ಶಿ ಶ್ರೀ ಕಾರ್ತಿಕ್ ಶೆಟ್ಟಿ, ಖಜಾಂಚಿ ಹಾಗೂ ಕಾರ್ಯಕ್ರಮ ಸಂಯೋಜಕರಾದ ಶ್ರೀ ವಿಜಿತ್ ಶೆಟ್ಟಿ, ಸಂಯೋಜಕರಾದ ಶ್ರೀ ಪದ್ಮನಾಭ ಹೆಗ್ಡೆ ಹಾಗೂ ಶ್ರೀಮತಿ ರಂಜಿನಿ ಹೆಗ್ಡೆ ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜಸ್ಟಿಸ್ ಕೆ. ಎಸ್. ಹೆಗ್ಡೆ ನಿಟ್ಟೆ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಸುಧೀರ್ ರಾಜ್ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯ, ಮುಕ್ಕ ಇದರ ಅಂತರರಾಷ್ಟ್ರೀಯ ಸಹಯೋಗಗಳು ಮತ್ತು ಜಾಗತಿಕ ಸಂಪರ್ಕ ವಿಭಾಗದ ನಿರ್ದೇಶಕರಾದ ಡಾ. ದಿವ್ಯಾ ರಾಣಿ ಪ್ರದೀಪ್ ಸಹಕಾರ ನೀಡಲಿದ್ದಾರೆ.
ಕೌಶಲ್ಯ ಅಭಿವೃದ್ಧಿ ಕೇಂದ್ರದ ಶ್ರೀ ವಿಷ್ಣುಮೂರ್ತಿ ಆಚಾರ್ಯ ಕಾರ್ಯಕ್ರಮದ ಸಂಯೋಜನೆ ವಹಿಸಲಿದ್ದು, ಸಾರ್ವಜನಿಕರು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

